Home My Profile Introduction List of All Topics Devotional Songs Stotras in English

Panchanga 2016/2017 List of Festivals All Devi Stotras Contact Me Thanks

July 27, 2009

Varamahalakshmi Vrata / ವರಮಹಾಲಕ್ಷ್ಮಿ ವ್ರತ


ವರಮಹಾಲಕ್ಷ್ಮಿ ವ್ರತ - ಹೆಸರೇ ಸೂಚಿಸುವಂತೆ ವರಗಳನ್ನು ಕೊಡುವ ಲಕ್ಷ್ಮಿ ದೇವಿಯ ವ್ರತ ಇದು.ಈ ವ್ರತವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಶುಕ್ರವಾರ ಮಾಡುತ್ತಾರೆ. ಪೂರ್ಣಿಮೆಯ ಹಿಂದಿನ ಶುಕ್ರವಾರ ಮಾಡಬೇಕು. ಕೆಲವರ ಮನೆಯಲ್ಲಿ ವ್ರತ ಮಾಡುವ ಪದ್ಧತಿಗೆ ಇರುತ್ತೆ, ವ್ರತ ಮಾಡುವ ಪದ್ಧತಿ ಇಲ್ಲದಿದ್ದರೆ ಲಕ್ಷ್ಮಿ ದೇವಿಗೆ ಪೂಜೆ ಮಾಡಿ.

ದಿನ ಬೆಳಿಗ್ಗೆ ಎದ್ದು ಮಂಗಳ ಸ್ನಾನ ಮಾಡಬೇಕು. ವ್ರತ ಮಾಡುವವರು ಕಲಶ ಸ್ಥಾಪನೆ ಮಾಡಬೇಕು. ಪೂಜೆ ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ ಪದ್ಮದ ರಂಗವಲ್ಲಿ ಹಾಕಬೇಕು. ಇದರ ಮೇಲೆ ಕಲಶ ಸ್ಥಾಪಿಸಬೇಕು. ಒಂದು ಚೊಂಬಿನಲ್ಲಿ ಸ್ವಲ್ಪ ನೀರು/ಅಕ್ಕಿ ಹಾಕಿ, ಜೊತೆಗೆ ಅರಿಶಿನದ ಗೊನೆ, ಅಡಿಕೆ, ಬೆಳ್ಳಿ ನಾಣ್ಯ / ಯಾವುದೇ ನಾಣ್ಯ(coin) ಹಾಕಿ.ಅದರ ಮೇಲೆ ಅರಿಶಿನ ಕುಂಕುಮ ಸವರಿದ ತೆಂಗಿನಕಾಯಿ ಇಟ್ಟು, ಇದರ ಮೇಲೆ ಮುಖದ ಆಕಾರದ ಚಿತ್ರ ಬರೆಯಬಹುದು ಅಥವಾ ಲಕ್ಷ್ಮಿ ದೇವಿಯ ಬೆಳ್ಳಿಯ ಮುಖವಾಡ ಇದ್ದರೆ ಅದನ್ನು ಈ ತೆಂಗಿನಕಾಯಿಗೆ ಜೋಡಿಸಿ. ಕಳಶದ ಬಾಯಿಗೆ ವೀಳ್ಯದ ಎಲೆ , ಮಾವಿನ ಎಲೆಗಳನ್ನು ಇಡಬೇಕು. ಕಳಶವನ್ನು ಅಕ್ಕಿ ಹರಡಿರುವ ತಟ್ಟೆಯ ಮೇಲೆ ಇಡಬೇಕು. ತಟ್ಟೆಯನ್ನು ಅಷ್ಟದಳ ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ವಡವೆ ಹಾಕಿ ಅಲಂಕಾರ ಮಾಡಬಹುದು. ಈ ಕಲಶಕ್ಕೆ ಶ್ರೀ ಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲಶವನ್ನು ಪೂಜೆ ಮಾಡಬೇಕು. ವರಮಹಾಲಕ್ಷ್ಮಿ ಪೂಜೆಯ ಚಿತ್ರ ಕೆಳಗಿದೆ.

ವರಮಹಾಲಕ್ಷ್ಮಿ ಕಲಶ ಸ್ಥಾಪನೆ , ಪೂಜೆ (karnataka.com)
ಷೋಡಶೋಪಚಾರದಿಂದ ಮಾಡುವ ಪೂಜಾ ವಿಧಿ ಇಲ್ಲಿದೆ. ಪೂಜಾ ಸಾಮಗ್ರಿಗಳ ಪಟ್ಟಿ ಇಲ್ಲಿದೆ. ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಈ ದಾರವನ್ನು ಕೈಗೆ ಕಟ್ಟಿಕೊಳ್ಳಬೇಕು. ಪೂಜಾ ವಿಧಾನ ಇಲ್ಲಿದೆ. ಗಣಪತಿ ಅಷ್ಟೋತ್ತರ ಇಲ್ಲಿದೆ. ವಿನಾಯಕನಿಗೆ ಪೂಜೆ ಮಾಡಿ ನಂತರ ವರಮಹಾಲಕ್ಷ್ಮಿ ದೇವಿಗೆ ಪೂಜೆ ಮಾಡಿ.ಪೂಜೆಯ ನಂತರ ಕಥಾ ಶ್ರವಣ ಮಾಡಬೇಕು. ಸುಮಂಗಲಿಯರಿಗೆ ಅರಿಶಿನ ಕುಂಕುಮ ಕೊಡಬೇಕು.
ವರಮಹಾಲಕ್ಷ್ಮಿ ವ್ರತ ಪೂಜಾ ವಿಧಾನದ ಧ್ವನಿ ಮುದ್ರಣ ಇಲ್ಲಿ ಕೇಳಬಹುದು:
ವರಮಹಾಲಕ್ಷ್ಮಿ ವ್ರತ ಕಥೆ ಇಲ್ಲಿ ಓದಬಹುದು (thatskannada)

ಪೂಜೆಯ ಮಾರನೆಯ ದಿನ ಶನಿವಾರ, ದೇವರ ವಿಸರ್ಜನೆ ಮಾಡಿ, ನಂತರ ಕಲಶ ಪಾತ್ರೆಯ ಅಕ್ಕಿಯನ್ನು ಅಡಿಗೆಯಲ್ಲಿ ಉಪಯೋಗಿಸಿ, ಕಲಶಕ್ಕೆ ಇಟ್ಟ ತೆಂಗಿನಕಾಯಿಯಿಂದ ಸಿಹಿ ತಿಂಡಿಯನ್ನು ಮಾಡಿ. ವ್ರತದ ದಿನ ಪೂಜೆ ಮಾಡಲು ಆಗದಿದ್ದರೆ, ಶ್ರಾವಣದಲ್ಲಿ ಇನ್ನೊಂದು ಶುಕ್ರವಾರ ಈ ವ್ರತ ಮಾಡಬಹುದು.
ವರಮಹಾಲಕ್ಷ್ಮಿಯು ನಮ್ಮೆಲ್ಲರನ್ನು ಅನುಗ್ರಹಿಸಿ ಕಾಪಾಡಲಿ :)
Useful Links:

Lakshmi Ashottara
Lakshmi Ashtakam

All Devi Stotras

Lakshmi Sahasranama

Get this widget | Track details |


Songs on Lakshmi Devi

July 22, 2009

Sri Subrahmanya Ashtakam in Kannada / ಶ್ರೀ ಸುಬ್ರಹ್ಮಣ್ಯಾಷ್ಟಕಂ

ನಾಗರ ಪಂಚಮಿ ಹಬ್ಬಕ್ಕೆ ಇನ್ನೊಂದು ಸುಬ್ರಮಣ್ಯ ಸ್ತೋತ್ರ ಇಲ್ಲಿದೆ. ಸುಬ್ರಹ್ಮಣ್ಯ ಅಷ್ಟಕಂ ಸ್ತೋತ್ರ ಕನ್ನಡದಲ್ಲಿದೆ. ದೊಡ್ಡದಾಗಿ ಮಾಡಲು ಚಿತ್ರದ ಮೇಲೆ ಕ್ಲಿಕ್ ಮಾಡಿ .



1.Audio by Hari Achuta Rama Shastry (song 9)


2.Subramanyaashtakam Stotra by Sulamangalam Sisters Below:



July 20, 2009

Nagara Panchami / Panchami Habba / ನಾಗರ ಪಂಚಮಿ ಹಬ್ಬ

ನಾಗರ ಪಂಚಮಿ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ಆಚರಿಸುತ್ತಾರೆ. ಈ ಹಬ್ಬವನ್ನು ಪಂಚಮಿ ಹಬ್ಬ, ಒಡಹುಟ್ಟಿದವರ ಹಬ್ಬ ಎಂದೂ ಕರೆಯುತ್ತಾರೆ. ಈ ಹಬ್ಬದಲ್ಲಿ ನಾಗಪ್ಪ / ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಹಬ್ಬವನ್ನು ಬಹಳ ನೇಮ, ನಿಷ್ಠೆಯಿಂದ ಆಚರಿಸುತ್ತಾರೆ.
ಬೆಳಿಗ್ಗೆ ಮಂಗಳ ಸ್ನಾನ ಮಾಡಬೇಕು. ಮಡಿ ಬಟ್ಟೆಗಳನ್ನು ತೊಟ್ಟು ಪೂಜೆ ಮಾಡಬೇಕು. ದೇವರ ಮನೆಯಲ್ಲಿ ಹುತ್ತದ ಮಣ್ಣಿನಿಂದ ಹಾವಿನ ಆಕಾರ ಮಾಡಿಇಟ್ಟುಕೊಳ್ಳಬಹುದು ಅಥವಾ ಬೆಳ್ಳಿ ನಾಗಪ್ಪನ ವಿಗ್ರಹ ಇಟ್ಟುಕೊಳ್ಳಬಹುದು. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಪಟ ಇದ್ದೇ ಇರುತ್ತೆ. ಇದನ್ನೂ ಜೊತೆಯಲ್ಲಿ ಇಟ್ಟು ಪೂಜೆ ಮಾಡಬಹುದು. ಕೆಲವರು ಹಾವಿನಾಕಾರದ ರಂಗೋಲಿಯನ್ನು ಬರೆಯುತ್ತಾರೆ. ನಾಗಪ್ಪನಿಗೆ ಹಾಲು, ನೀರಿನಿಂದ ತನಿ ಎರೆಯುತ್ತಾರೆ. ಸಾಮಾನ್ಯವಾಗಿ ತಾಳೆ(ಕೇದಿಗೆ) ಗಿಡದ ಎಲೆ/ಹೂವನ್ನು ಉಪಯೋಗಿಸಿ ತನಿ ಎರೆಯುತ್ತಾರೆ. ತಾಳೆ(ಕೇದಿಗೆ) ಗಿಡದ ಚಿತ್ರ ಕೆಳಗಿದೆ.(biological name: Pandanus fascicularis)
click on image to enlarge

ಮಂತ್ರಾಕ್ಷತೆ ಉಪಯೋಗಿಸುವುದಿಲ್ಲ . ಅದರ ಬದಲು ಅಕ್ಕಿ ಹಿಟ್ಟು, ಕಡಲೆ ಕಾಳು ಸೇರಿಸಿದ ಮಿಶ್ರಣ ಉಪಯೋಗಿಸುತ್ತಾರೆ.
ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಷೋಡಶೋಪಚಾರದಿಂದ ಪೂಜೆಮಾಡಬೇಕು. ಪೂಜಾ ವಿಧಾನ ಇಲ್ಲಿದೆ.ಪೂಜಾ ಸಾಮಗ್ರಿಗಳ ವಿವರ ಇಲ್ಲಿದೆ. ಸುಬ್ರಹ್ಮಣ್ಯ ಅಷ್ಟೋತ್ತರ ಇಲ್ಲಿದೆ.
ನೈವೇದ್ಯಕ್ಕೆ ಚಿಗಳಿ ( ಎಳ್ಳು ಮತ್ತು ಬೆಲ್ಲ ಸೇರಿಸಿ ಮಾಡುವ ಸಿಹಿ ತಿನಿಸು) ತಂಬಿಟ್ಟು ( ಅಕ್ಕಿ, ಬೆಲ್ಲ ಸೇರಿಸಿ ಮಾಡುವ ಸಿಹಿ ತಿನಿಸು) ಮಾಡುತ್ತಾರೆ. ಪೂಜೆಯ ನಂತರ ದೇವರ ಮುಂದೆ ಒಡಹುಟ್ಟಿದವರಿಗೆ ಹಾಲು ತನಿ ಎರೆಯುತ್ತಾರೆ. ಅಣ್ಣ , ಅಕ್ಕನಿಗೆ ನಮಸ್ಕಾರ ಮಾಡಿ ಆಶೀರ್ವಾದ ಪಡೆಯುತ್ತಾರೆ.
ನಾಗರ ಪಂಚಮಿ ಹಬ್ಬದ ವಿಶೇಷತೆ ಒಡಹುಟ್ಟಿದವರಿಗೆ ಹಾಲು ತನಿ ಎರೆಯುವುದು. ಅಕ್ಕ, ತಂಗಿ, ಅಣ್ಣ ತಮ್ಮ ಒಬ್ಬರಿಗೊಬ್ಬರು ತನಿ ಎರೆಯುತ್ತಾರೆ. ಹಾಲನ್ನು ಹೊಟ್ಟೆ ಬೆನ್ನಿಗೆ ಸವರಿ , ಹೊಟ್ಟೆ ಬೆನ್ನು ತಂಪಾಗಿರಲಿ ಅಂತ ಹಾರೈಸುತ್ತಾರೆ. ಹೊಟ್ಟೆ ಎಂದರೆ - ಮುಂದೆ ಬರುವ ಪೀಳಿಗೆ, ಹೊಟ್ಟೆಯಲ್ಲಿ ಹುಟ್ಟುವ ಮಕ್ಕಳು ಎಂಬ ಸಂಕೇತ , ಬೆನ್ನು ಎಂದರೆ ಹಿಂದಿನಪೀಳಿಗೆ ಅಂದ್ರೆ ನಮ್ಮ ಹಿರಿಯರು ಎಂಬ ಸಂಕೇತ. ಒಡಹುಟ್ಟಿದವರು ಮತ್ತು ಅವರ ಮಕ್ಕಳು ಎಲ್ಲರು ಚೆನ್ನಾಗಿರಲಿ ಎಂದು ಹಾರೈಸುತ್ತಾರೆ. ಹೀಗಾಗಿ ಇದನ್ನು ಒಡಹುಟ್ಟಿದವರ ಹಬ್ಬ ಎಂದೂ ಕರೆಯುತ್ತಾರೆ. ಊಟಕ್ಕೆ ಕಾಯಿ ಕಡುಬು, ಉದ್ದಿನ ಕಡುಬು ಮಾಡುತ್ತಾರೆ. ನಾಗಪ್ಪನಿಗೆ ಘಾಟು ಆಗಬಾರದೆಂದು ಯಾವುದೇ ಕರಿದ ತಿಂಡಿ ಮಾಡುವುದಿಲ್ಲ, ಅಡಿಗೆಗೆ ಒಗ್ಗರಣೆ ಹಾಕುವುದಿಲ್ಲ.

ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ದೇವಸ್ಥಾನದಲ್ಲಿರುವ ನಾಗರ ಕಲ್ಲುಗಳಿಗೆ ಪೂಜೆ ಮಾಡುತ್ತಾರೆ. ಮನೆಯ ಹತ್ತಿರ ಹುತ್ತ ಇದ್ದರೆ, ಅದಕ್ಕೆ ಅರಿಶಿನ ಕುಂಕುಮ ಹಾಕಿ, ಹಾಲು ಎರೆಯುತ್ತಾರೆ. ಒಟ್ಟಿನಲ್ಲಿ ನಾಗಪ್ಪನಿಗೆ ಹಾಲೆರೆದು ಸಂತೃಪ್ತಿ ಪಡಿಸಬೇಕೆಂಬ ನಂಬಿಕೆ.
ಉತ್ತರ ಕರ್ನಾಟಕದಲ್ಲಿ ಈ ಹಬ್ಬವನ್ನು ಪಂಚಮಿ ಹಬ್ಬ ಎನ್ನುತ್ತಾರೆ. ಇದನ್ನು ಅದ್ಧೂರಿಯಿಂದ ಮಾಡುತ್ತಾರೆ. ೩ - ೫ ದಿನಗಳ ಹಬ್ಬ ನಡೆಸುತ್ತಾರೆ. ಹೊಸದಾಗಿ ಮದುವೆಯಾದ ಹೆಣ್ಣು ಮಗಳನ್ನು ಅಣ್ಣ/ತಮ್ಮ ಅತ್ತೆ ಮನೆಯಿಂದ ತವರು ಮನೆಗೆ ಕರೆದುಕೊಂಡು ಹೋಗಲು ಬರುತ್ತಾರೆ. ಇದೇ ಪದ್ಧತಿ ಬಗ್ಗೆ ಒಂದು ಜನಪ್ರಿಯವಾದ ಭಾವಗೀತೆ ಕೂಡ ಇದೆ. ಕವಿಯಾದ ಬೆಟಗೇರಿ ಕೃಷ್ಣ ಶರ್ಮ (ಆನಂದಕಂದರು) ರಚಿಸಿರುವ "ಪಂಚಮಿ ಹಬ್ಬಕ್ ಉಳಿದಾವು ದಿನ ನಾಕ ಅಣ್ಣ ಬರಲಿಲ್ಲ ಯಾಕೋ ಕರಿಯಾಕ " ಹಾಡನ್ನು ಇಲ್ಲಿ ಕೇಳಬಹುದು. ಹೆಣ್ಣು ಮಕ್ಕಳು ಪಂಚಮಿ ಹಬ್ಬವನ್ನು ತವರು ಮನೆಗೆ ಹೋಗಿ ಆಚರಿಸುತ್ತಾರೆ. ಒಡಹುಟ್ಟಿದವರಿಗೆ ಹಾಲು ಎರೆದು ಉಡುಗೊರೆ ಕೊಡುತ್ತಾರೆ. ಇದಕ್ಕೆ ಉಂಡಿ /ಉಂಡೆ ಹಬ್ಬ ಎಂದೂ ಹೆಸರು. ವಿವಿಧವಾದ ಉಂಡೆಗಳನ್ನು ಮಾಡುತ್ತಾರೆ . ಜೋಕಾಲಿ ಕಟ್ಟಿ ಆಟ ಆಡುತ್ತಾರೆ. ಹೀಗೆ ಸಂಬ್ರಮದಿಂದ ಹಬ್ಬ ಮಾಡುತ್ತಾರೆ. ಕರ್ನಟಾಕದಲ್ಲೇ ಅಲ್ಲ, ಇಡೀ ಭಾರತ ದೇಶದಲ್ಲಿ ನಾಗ ಪಂಚಮಿ ಆಚರಿಸುತ್ತಾರೆ.
Useful Links:
Subramanya Ashottara
Subramanya Stotram

Subramanya Bhujangam


Subrahmanya Ashtaka
Subramanya Shodasha nama stotra
Subrahmanya Sahasranamavali

Subramanya Songs by VidyaBhushana:
  1. Bandu Nodiro Shree Subramanya
  2. Subbaraya Shubhakaya
  3. Subrahmanya Suragraganya
  4. Subramanya Subramanya


July 17, 2009

Subrahmanya Ashtottara in Kannada / ಶ್ರೀ ಸುಬ್ರಮಣ್ಯ ಅಷ್ಟೋತ್ತರ

ನಾಗರ ಪಂಚಮಿ ಹಬ್ಬ ಬರುತ್ತಾ ಇದೆ. ಅದಕ್ಕಾಗಿ ಶ್ರೀ ಸುಬ್ರಮಣ್ಯ ಅಷ್ಟೋತ್ತರ ಕೆಳಗಿದೆ. ದೊಡ್ಡದಾಗಿ ಮಾಡಲು ಚಿತ್ರದ ಮೇಲೆ ಕ್ಲಿಕ್ ಮಾಡಿ .

ಅಷ್ಟೊತ್ತರದ ಧ್ವನಿ ಮುದ್ರಣ ಕೆಳಗಿದೆ.
1.Subramanya Ashtottara Audio link - by Thiyagarajan (song 9)
2.Subramanya Ashtottara Audio link - by Lakshmipathi (song 12)

July 8, 2009

Shiva Tandava Stotra in Kannada / ಶ್ರೀ ಶಿವ ತಾಂಡವ ಸ್ತೋತ್ರ

ಪೂಜಾ ವಿಧಾನಕ್ಕೆ ಭೇಟಿ ಮಾಡಿದ Vinay ಅವರು ಶಿವ ತಾಂಡವ ಸ್ತೋತ್ರದ ಬಗ್ಗೆ ಬರೆಯಿರಿ ಅಂತ ಕೇಳಿದ್ದರು. ಇಲ್ಲಿದೆ ನಿಮ್ಮ ಸ್ತೋತ್ರ. ತಾಂಡವ ಎಂದರೆ ಶಿವನ ಒಂದು ಬಗೆಯ ನೃತ್ಯ. ಈ ಸ್ತೋತ್ರವನ್ನು ರಾವಣನು ರಚಿಸಿದ್ದಾನೆ. ರಾವಣನು ಈ ಸ್ತೋತ್ರವನ್ನು ಹೇಳಿ ಶಿವನನ್ನು ಮೆಚ್ಚಿಸಿ ವರಗಳನ್ನು ಪಡೆದನು ಎನ್ನುತ್ತಾರೆ. ಅಂತೆಯೇ ಯಾರು ಈ ಸ್ತೋತ್ರವನ್ನು ಪಠಿಸುತ್ತಾರೋ ಅವರಿಗೆ ಈಶ್ವರು ಎಲ್ಲ ತರದ ಸುಖ ಸಂಪತ್ತನ್ನು ಕೊಡುತ್ತಾನೆ ಎಂಬ ನಂಬಿಕೆ.
ಶ್ರೀ ಶಿವ ತಾಂಡವ ಸ್ತೋತ್ರ ಕೆಳಗಿದೆ. ದೊಡ್ಡದಾಗಿ ಮಾಡಲು ಚಿತ್ರದ ಮೇಲೆ ಕ್ಲಿಕ ಮಾಡಿ.



Meaning of Shiva tandava Stotram

1.AudioLink by Ravindra Sathe [song 7]

2.AudioLink by Rt. Jasraj[song 7]

3.AudioLink- by T.S.Ranganathan[song 7]

4.Shiva Tandav Stotram by RameshBhai Oza

ಶಿವನ ಕೃಪೆ ಎಲ್ಲರ ಮೇಲೂ ಸದಾ ಇರಲಿ :)

Related Link:

July 6, 2009

Guru Poornima / Vyasa Poornima /ಗುರು ಪೂರ್ಣಿಮಾ / ವ್ಯಾಸ ಪೂರ್ಣಿಮಾ


ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ

ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ


ಗುರು ಪೂರ್ಣಿಮಾ ಅಥವಾ ವ್ಯಾಸ ಪೂರ್ಣಿಮೆಯನ್ನು ಆಷಾಢ ಮಾಸದ ಪೂರ್ಣಿಮೆಯ ದಿನ ಆಚರಿಸುತ್ತಾರೆ. ಇಂದು ವೇದ ವ್ಯಾಸರ ಜನ್ಮ ದಿನ. ಇವರು ೪ ವೇದಗಳನ್ನು ಸಂಕಲನ ಮಾಡಿದರು ಎಂಬ ನಂಬಿಕೆ. ನಮ್ಮ ಹಿಂದೂ ಧರ್ಮದ ಪ್ರಕಾರ ಮನುಷ್ಯನಿಗೆ ಪರಬ್ರಹ್ಮನ ಜ್ಞಾನ ಉಂಟಾಗಿ ಮೋಕ್ಷ ಹೊಂದುವುದೇ ಜೀವನದ ಉದ್ದೇಶ. ಈ ಗುರಿಯನ್ನು ತಲುಪುವುದಕ್ಕೆ ವೇದಗಳು ಪ್ರಮುಖ ಪಾತ್ರ ಹೊಂದಿದೆ. ಈ ವೇದಗಳನ್ನು ನಮಗೆ ಕೊಟ್ಟಿರುವ ವೇದ ವ್ಯಾಸರು ಧರ್ಮ ಗುರುಗಳು. ಇವರಿಗೆ ನಮ್ಮ ಅನಂತ ನಮಸ್ಕಾರಗಳು.

ಗುರು ಎಂಬ ಪದವು ಸಂಸ್ಕೃತದಿಂದ ಬಂದಿದೆ. 'ಗು' ಎಂದರೆ ಅಂಧಕಾರ ,ಕತ್ತಲೆ . 'ರು' ಎಂದರೆ ತೊಲಗಿಸು, ದೂರ ಮಾಡು ಎಂದರ್ಥ. ಗುರು ಎಂದರೆ ಅಂಧಕಾರವನ್ನು ತೊಲಗಿಸುವವನು ಎಂದು ಅರ್ಥೈಸಬಹುದು. ಪೂರ್ಣಿಮೆಯ ದಿನ ಚಂದ್ರನು ಪ್ರಕಾಶಮಾನ ಆಗಿರುತ್ತಾನೆ. ಚಂದ್ರನಂತೆ ಪ್ರಕಾಶಿಸುತ್ತಿರುವ ಗುರುವು ನಮ್ಮ ಬಾಳಲ್ಲಿರುವ ಅಂಧಕಾರವನ್ನು ತೊಲಗಿಸಿ , ಜ್ಞಾನದ ಬೆಳಕನ್ನು ಕೊಡುತ್ತಾನೆ ಎಂಬ ಸಂಕೇತವಾಗಿ ಈ ಗುರು ಪೂರ್ಣಿಮಾ ಹಬ್ಬವನ್ನು ಆಚರಿಸುತ್ತಾರೆ.

ಶಂಕರಾಚಾರ್ಯರು, ದತ್ತಾತ್ರೇಯರು, ರಾಘವೇಂದ್ರ ಸ್ವಾಮಿಗಳು, ರಮಣ ಮಹರ್ಷಿ, ರಾಮಕೃಷ್ಣ ಪರಮಹಂಸ ,ಸಾಯಿ ಬಾಬರವರು, ಶ್ರೀ ರವಿಶಂಕರ - ಹೀಗೆ ಹಲವಾರು ಮಹಾಪುರುಷರು ಗುರು ಸ್ವರೂಪರಾಗಿ ನಮಗೆಲ್ಲ ಮಾರ್ಗದರ್ಶನ ನೀಡಿದ್ದಾರೆ. ಪ್ರತಿಯೊಬ್ಬರೂ ತಮ್ಮ ಇಷ್ಟದಂತೆ ಗುರುಗಳನ್ನು ಅನುಸರಿಸುತ್ತಾರೆ. ಈ ದಿನ ಇಷ್ಟೊಂದು ಪ್ರಾಬಲ್ಯ, ಮಹಿಮೆ ಇರುವ ಗುರುಗಳಿಗೆ ನಮನಗಳನ್ನು ಸಲ್ಲಿಸುತ್ತಾರೆ. ಇದಲ್ಲದೇ ನಮ್ಮ ತಾಯಿ, ತಂದೆ, ಪಾಠ/ವಿದ್ಯೆ/ಸಂಗೀತ/ಕಲೆ ಹೇಳಿಕೊಟ್ಟಿರುವ ಗುರುಗಳು - ಇವರಿಗೂ ನಮಸ್ಕಾರಗಳನ್ನು ಸಲ್ಲಿಸಬೇಕು.

ಹಬ್ಬವನ್ನು ಆಚರಿಸುವುದಕ್ಕೆ ವಿಶೇಷವಾದ ಪೂಜೆ ಅಂತಿಲ್ಲ. ನಂಬಿರುವ ಗುರುಗಳ ಪೂಜೆ ಮಾಡುತ್ತಾರೆ. ಗುರುಗಳ ಧ್ಯಾನ, ಭಜನೆ ಮಾಡುತ್ತಾರೆ. ಕೆಲವರು ಸತ್ಸಂಗ ಏರ್ಪಡಿಸುತ್ತಾರೆ. ಹಲವು ಕಡೆ ಗುರುಗಳಿಗೆ ಸತ್ಕಾರ ಕಾರ್ಯಕ್ರಮ(felicitation) ಇರುತ್ತದೆ. ಒಟ್ಟಿನಲ್ಲಿ ಈ ದಿನ ಗುರುವಿನ ಸ್ಮರಣೆಗೆ ಮೀಸಲಾಗಿದೆ.


Useful Links:

ಗುರುಗಳು ನಮ್ಮೆಲರಿಗೂ ಜ್ಞಾನ ನೀಡಿ ಕಾಪಾಡಲಿ :)
Blog Widget by LinkWithin