Home My Profile Introduction List of All Topics Devotional Songs Stotras in English

Panchanga 2016/2017 List of Festivals All Devi Stotras Contact Me Thanks
Showing posts with label :Lakshmi. Show all posts
Showing posts with label :Lakshmi. Show all posts

July 24, 2010

Vaibhava Lakshmi Vrata in Kannada / ವೈಭವ ಲಕ್ಷ್ಮಿ ವ್ರತ

ಕಳೆದ ಹಲವು ದಿನಗಳಲ್ಲಿ ಬಹಳ ಜನ ಓದುಗರು ವೈಭವ ಲಕ್ಷ್ಮಿ ವ್ರತದ ಬಗ್ಗೆ ಬರೆಯಿರಿ ಅಂತ ಕೋರಿಕೆ ಮಾಡಿದ್ದರೆ. ಹಾಗಾಗಿ ಈ ವೈಭವ ಲಕ್ಷ್ಮಿ ಪೂಜೆ ಬಗ್ಗೆ ವಿವರ ಇಲ್ಲಿದೆ.ಈ ವ್ರತವನ್ನು ಶುಕ್ರವಾರ ಸಂಜೆ ಮಾಡಬೇಕು. ಲಕ್ಷ್ಮೀ ಯಂತ್ರವನ್ನು ರಂಗೊಲಿಯಾಗಿ ಬರೆಯಬಹುದು ಅಥವಾ ಚಿತ್ರವನ್ನು ಇಡಬಹುದು. ಇದರ ಮೇಲೆ ಒಂದು ಕಲಶ ಪಾತ್ರೆಯಲ್ಲಿ ಆಭರಣ ಇಟ್ಟು ಪೂಜೆ ಮಾಡಬೇಕು. ಹೀಗೆ ೫ ಶುಕ್ರ ವಾರ ಪೂಜೆ ಮಾಡಿದ ನಂತರ ೮ ಜನ ಸುಮಂಗಲಿಯರಿಗೆ ಅರಿಶಿನ ಕುಂಕುಮ ಹಾಗು ಈ ಪುಸ್ತಕದ ಒಂದು ಪ್ರತಿಯನ್ನು ಕೊಡಬೇಕು.ಪೂಜಾ ವಿಧಾನದ ಪೂರ್ಣ ವಿವರ ಕೆಳಗಿದೆ. ದೊಡ್ಡದಾಗಿ ಮಾಡಲು ಚಿತ್ರದ ಮೇಲೆ ಕ್ಲಿಕ್ ಮಾಡಿ.

Lakshmi yantra / Vaibhava lakshmi Rangoli(left side)
Vaibhava Lakshmi Pooja Vidhana in Kannada - scanned from book
12345

6789
----------------------------------------------------

Lakshmi Stotras:

1.Vaibhava Lakshmi Pooja Vidhana Audio in Kannada

2.Mahalakshmi Ashtakam

3.Lakshmi Ashtottara

4.Ashtalakshmi Stotra

5.Kanakadhara Stotra

6.Lakshmi Songs with lyrics


ವೈಭವ ಲಕ್ಷ್ಮಿಯು ಎಲ್ಲರಿಗೂ ಐಶ್ವರ್ಯ ಅಭಿವೃದ್ಧಿ ಕೊಟ್ಟು ಕಾಪಾಡಲಿ :)

June 4, 2010

Mookambika Ashtakam in Kannada / ಮೂಕಾಂಬಿಕ ಅಷ್ಟಕ

ಓದುಗರೊಬ್ಬರು ಮೂಕಾಂಬಿಕಾ ಅಷ್ಟಕವನ್ನು ಪ್ರಕಟಿಸಿ ಅಂತ ಕೋರಿಕೆ ಮಾಡಿದ್ದರು, ನಿಮಗಾಗಿ ಸ್ತೋತ್ರ ಇಲ್ಲಿದೆ.
ದೊಡ್ಡದಾಗಿ ಮಾಡಲು ಕೆಳಗಿನ ಚಿತ್ರದ ಮೇಲೆ ಕ್ಲಿಕ್ ಮಾಡಿ.


1.Audio Link by Mahanadi Shobhana


2.Audio link by Sulamangala Sisters

May 23, 2010

Kanakadhara Stotra in Kannada / ಕನಕಧಾರಾ ಸ್ತೋತ್ರ


ಶ್ರೀ ಶಂಕರಾಚಾರ್ಯರು ರಚಿಸಿರುವ ಕನಕಧಾರ ಸ್ತೋತ್ರ ಶ್ರೀ ಮಹಾಲಕ್ಷ್ಮಿಯನ್ನು ಸ್ತುತಿ ಮಾಡುತ್ತದೆ. ಈ ಸ್ತೋತ್ರವನ್ನು ಪಠಿಸಿದರೆ ಕಷ್ಟಗಳು ಹೋಗಿ, ಐಶ್ವರ್ಯ, ಸಂಪತ್ತು, ಅಭಿವೃದ್ಧಿ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ. ಓದುಗರೊಬ್ಬರು ಈ ಸ್ತೋತ್ರವನ್ನು ಪ್ರಕಟಿಸಿ ಅಂತ ಕೋರಿಕೆ ಮಾಡಿದ್ದರು. ಸ್ತೋತ್ರ ಕನ್ನಡದಲ್ಲಿದೆ.


ದೊಡ್ಡದಾಗಿ ಮಾಡಲು ಕೆಳಗಿನ ಚಿತ್ರದ ಮೇಲೆ ಕ್ಲಿಕ್ ಮಾಡಿ.


1.Audio link by Bombay Sister

2.Audio Link by M.S.Subbalakshmi

3.Another Audio Link


March 13, 2010

Sri Suktam in Kannada / ಶ್ರೀ ಸೂಕ್ತಂ

ಶ್ರೀ ಸೂಕ್ತ ಲಕ್ಷ್ಮೀ ದೇವಿಯ ಮೇಲಿನ ಸ್ತೋತ್ರ. ಈ ಸ್ತೋತ್ರವನ್ನು ಪಠಿಸಿದರೆ ಲಕ್ಷ್ಮಿಯು ಐಶ್ವರ್ಯ, ಅಭಿವೃದ್ಧಿ, ನೆಮ್ಮದಿ, ಸಂತೋಷ, ಸಕಲ ಸಂಪತ್ತನ್ನು ಅನುಗ್ರಹಿಸುತ್ತಾಳೆ ಎಂಬ ನಂಬಿಕೆ ಇದೆ.

ಶ್ರೀ ಸೂಕ್ತ ಕನ್ನಡದಲ್ಲಿದೆ.
ದೊಡ್ಡದಾಗಿ ಮಾಡಲು ಚಿತ್ರದ ಮೇಲೆ ಕ್ಲಿಕ ಮಾಡಿ.




1. Audio Link by Challakere Brothers

2. Audio Link by Anantha Kulkarni (Album Link)

3. Audio Link by Thiagarajan (song7)

4. Audio Link by Shweta Pandit below

October 16, 2009

Naraka Chaturdashi, Deepavali Lakshmi Pooja, Balipadyami Festival / ದೀಪಾವಳಿ ಹಬ್ಬ

(Diwali greeting source: shubhashaya.com)
ಸ್ನೇಹಿತರಿಗೆಲ್ಲ ದೀಪಾವಳಿ ಹಬ್ಬದ ಶುಭಾಶಯಗಳು :)
ದೀಪಾವಳಿ ಹಬ್ಬವನ್ನು ಆಶ್ವಯುಜ ಮಾಸದ ಕೃಷ್ಣ ಪಕ್ಷದಲ್ಲಿ ಆಚರಿಸುತ್ತೀವಿ. ದೀಪಾವಳಿ ಅಂದರೆ ೩-೪ ದಿನದ ಹಬ್ಬ.
  • ತ್ರಯೋದಶಿ ದಿನ - ನೀರು ತುಂಬುವ ಹಬ್ಬ
  • ಚತುರ್ದಶಿ ದಿನ - ನರಕ ಚತುರ್ದಶಿ
  • ಅಮಾವಾಸ್ಯೆ ದಿನ - ಧನ ಲಕ್ಷ್ಮೀ ಪೂಜೆ
  • ಪಾಡ್ಯ ದಿನ - ಬಲಿ ಪಾಡ್ಯಮಿ /ಬಲೀಂದ್ರನ ಪೂಜೆ
ನೀರು ತುಂಬುವ ಹಬ್ಬ - ಹೆಸರೇ ಹೇಳುವಂತೆ ನೀರನ್ನು ಸಂಗ್ರಹಿಸುವ ದಿನ. ಈ ದಿನ ಸ್ನಾನದ ಮನೆ, ಬಚ್ಚಲನ್ನು ಸ್ವಚ್ಛಮಾಡಿ, ಮಾರನೆಯ ದಿನದ ಅಭ್ಯಂಜನಕ್ಕೆ ನೀರು ಹಿಡಿದು ಇಡುತ್ತಾರೆ. ಕೊಳೆಯನ್ನು ಹೋಗಿಸಿ ಮನೆಯನ್ನು ಶುಭ್ರಮಾಡುವಂತೆ , ನಮ್ಮ ಮನಸಿನಲ್ಲಿರುವ ಕೆಟ್ಟ ವಿಷಯಗಳನ್ನು ತೊಲಗಿಸಿ ನಿರ್ಮಲವಾಗಿ ಇಟ್ಟುಕೊಳ್ಳಿ ಎಂಬ ಸಂಕೇತ ಇರಬಹುದು. ಹಿಂದಿನ ಕಾಲದಲ್ಲಿ ತುಂಬಿದ ಸಂಸಾರ, ಮನೆಯಲ್ಲಿ ಬಹಳ ಜನ ಇರುತ್ತಿದ್ದರು. ಎಲ್ಲರೂ ಒಂದೇ ದಿನ ಅಭ್ಯಂಜನ ಮಾಡಬೇಕಾದರೆ ಸಾಕಷ್ಟು ನೀರು ಮೊದಲೇ ಶೇಖರಿಸಿ ಇಡಬೇಕಿತ್ತು.ಹೀಗಾಗಿ ಈ ದಿನ ನೀರುಹಿಡಿಯುವುದರಲ್ಲೇ ಕಳೆದು ಹೋಗುತ್ತಿತ್ತು ಅನ್ನಿಸುತ್ತದೆ.ಅದಕ್ಕೆ ದಿನವನ್ನು ನೀರು ತುಂಬುವ ಹಬ್ಬವೆಂದು ಆಚರಿಸುವ ವಾಡಿಕೆ ಬಂತೇನೋ.ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೆ :)

ನರಕ ಚತುರ್ದಶಿ ದಿನ ಬೆಳಿಗ್ಗೆ ಮನೆಯವರೆಲ್ಲ ಎಣ್ಣೆ ಶಾಸ್ತ್ರ ಮಾಡಿ ಅಭ್ಯಂಜನ ಸ್ನಾನ ಮಾಡುವ ಪದ್ಧತಿ. ಶ್ರೀ ಕೃಷ್ಣನು ನರಕಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದ ನೆನಪಿನ ದಿನ. ಈ ವಿಜಯವನ್ನು ಆಚರಿಸುತ್ತೀವಿ. ಈ ದಿನ ವಿಶೇಷವಾದ ಪೂಜೆ ಅಂತೇನು ಇಲ್ಲ. ಪ್ರತಿದಿನದಂತೆ ದೇವರ ಪೂಜೆ ಅಷ್ಟೆ.

Amavasya Lakshmi Pooje:

ಮಾರನೆಯ ದಿನ ಅಮಾವಾಸ್ಯೆ.ಧನಲಕ್ಷ್ಮೀ ಪೂಜೆ ಅಮಾವಾಸ್ಯೆ ದಿ ಮಾಡುತಾರೆ. ಪೂಜೆಯನ್ನು ಸಾಯಂಕಾಲ ಮಾಡಬೇಕು. ದೇವರ ಮನೆ ಅಥವಾ ಪೂಜೆ ಮಾಡುವ ಸ್ಥಳವನ್ನು ರಂಗೋಲಿ ಹಾಕಿ ಅಲಂಕರಿಸಿ. ಲಕ್ಷ್ಮಿ ದೇವಿ ಫೋಟೋ , ಬೆಳ್ಳಿ ವಿಗ್ರಹ /ಪ್ರತಿಮೆ ಇಟ್ಟುಕೊಳ್ಳಿ. ದರ ಜೊತೆಗೆ ನಿಮ್ಮ ಮನೆಯಲ್ಲಿರುವ ದುಡ್ಡು/ಕಾಸು/ನಾಣ್ಯಗಳು ಮತ್ತು ವಡವೆ/ಆಭರಣಗಳನ್ನೂ ದೇವರ ಜೊತೆ ಇಟ್ಟು ಪೂಜೆ ಮಾಡಿ. ಮೊದಲು ಗಣಪತಿ ಪೂಜೆ, ನಂತರ ಮಹಾಲಕ್ಷ್ಮಿ ಪೂಜೆ. ಪೂಜಾ ವಿಧಾನ ಇಲ್ಲಿದೆ.ಪೂಜಾ ಸಾಮಗ್ರಿಗಳ ವಿವರ ಇಲ್ಲಿದೆ. ಲಕ್ಷ್ಮೀ ಅಷ್ಟೂತ್ತರ ಇಲ್ಲಿದೆ. ಯಾವುದಾದರು ಸಿಹಿ ತಿಂಡಿ ಮಾಡಿ, ದೇವಿಗೆ ನೈವೇದ್ಯ ಮಾಡಿ. ಪೂಜೆಯ ನಂತರ ಇದನ್ನು ಪ್ರಸಾದವಾಗಿ ಸ್ವೀಕರಿಸಿ. ಸಕಲ ಐಶ್ವರ್ಯ ಸಂಪತ್ತನ್ನು ಕರುಣಿಸಿ ಎಂದು ಭಕ್ತಿಯಿಂದ ಲಕ್ಷ್ಮಿಯನ್ನು ಪ್ರಾರ್ಥಿಸಿ.ನಮ್ಮ ಮನೆಯಲ್ಲಿ ಮಾಡಿದ ಪೂಜೆಯ ಚಿತ್ರ ಕೆಳಗಿದೆ.
Lakshmi Stotras:
1. Mahalakshmi Ashtaka

2.Lakshmi Ashtottara

3.Ashtalakshmi Stotra

4.Kanakadhara Stotra

5. Lakshmi aarti song

6. Songs on Lakshmi with lyrics

ಅಮಾವಾಸ್ಯೆ ಮಾರನೆಯ ದಿನ ಕಾರ್ತಿಕ ಮಾಸದ ಪಾಡ್ಯ/ಪ್ರತಿಪತ್ . ಈ ದಿನ ಬಲಿ ಪಾಡ್ಯಮಿ ಹಬ್ಬ. ಬಲಿ ಚಕ್ರವರ್ತಿಯು ಭೂಲೋಕ ಆಳುತ್ತಿದ್ದ ರಾಜ. ವಿಜಯಶಾಲಿಯಾದ ರಾಜನು ದೇವಲೋಕವನ್ನೂ ಗೆದ್ದುಕೊಂಡು ತನ್ನದಾಗಿಸಿಕೊಂಡನು. ಇದರಿಂದ ಇಂದ್ರಾದಿ ದೇವತೆಗಳು ದೇವಲೋಕವನ್ನು ಬಿಡುವಂತಾಯಿತು. ಅವರು ವಿಷ್ಣುವಿನಲ್ಲಿ ಮೊರೆ ಹೋದರು. ಆಗ ಶ್ರೀ ವಿಷ್ಣು ವಾಮನ ಅವತಾರ ತಾಳಿ ಬಲಿಯ ಬಳಿ ಬಂದು, ತನಗೆ ೩ ಹೆಜ್ಜೆ ಇಡುವಷ್ಟು ಜಾಗ ಕೊಡು ಎಂದು ಕೇಳಿದನು. ಒಂದು ಹೆಜ್ಜೆಯಿಂದ ಭೂಲೋಕವೆಲ್ಲ ಮುಚ್ಚಿತು, ಇನ್ನೊಂದು ಹೆಜ್ಜೆಯಿಂದ ಆಕಾಶವೆಲ್ಲ ಮುಚ್ಚಿ ಹೋಯಿತು. ಮೂರನೆಯ ಹೆಜ್ಜೆ ಎಲ್ಲಿ ಇಡಲಿ ಎಂದು ವಾಮನ ಕೇಳಲು, ಬಲಿಯು ನನ್ನ ತಲೆ ಮೇಲೆ ಇಡು ಎಂದನು. ಹೀಗ ವಿಷ್ಣುವು ಬಲಿಯ ತಲೆಯನ್ನು ಮೆಟ್ಟಿ ಅವನನ್ನು ಪಾತಾಳಕ್ಕೆ ತುಳಿದನು. ಬಲಿಯ ಧರ್ಮ ನಿಷ್ಠೆಯನ್ನು ಮೆಚ್ಚಿ ವಿಷ್ಣುವು ಅವನಿಗೆ ಪಾತಾಳದ ಅಧಿಪತ್ಯ ಕೊಟ್ಟನು. ಜೊತೆಗೆ ವರುಷಕ್ಕೆ ಒಂದು ದಿನ ಭೂಲೋಕಕ್ಕೆ ಮರಳಿ ಬಂದು, ಭೂಲೋಕವನ್ನು ಆಳುವಂತೆ ಅನುಗ್ರಹಿಸಿದನು. ಇದೆ ಬಲಿಪಾಡ್ಯಮಿ. ಈ ದಿನ ಗೊಪೂಜೆಯೂ ನಡೆಯುತ್ತದೆ. ಮನೆಯಲ್ಲಿ ಬೆಳ್ಳಿ ಕೃಷ್ಣ, ಬೆಳ್ಳಿ ಹಸು ಪ್ರತಿಮೆಗಳಿಗೆ ಪೂಜೆ ಮಾಡುತ್ತಾರೆ. ಕೆಲವರ ಮನೆಯಲ್ಲಿ ಕೆರಕ ಇಟ್ಟು ಪೂಜೆ ಮಾಡುತ್ತಾರೆ. ಕೆರಕ ಎಂದರೆ ಹಸುವಿನ ಸಗಣಿಯ ಉಂಡೆಗೆ ಚೆಂಡುಹೂವು ಇಡುತ್ತಾರೆ. ಇದು ಗಣಪತಿಯ ಸ್ವರೂಪ ಎಂದು ಭಾವಿಸುತ್ತಾರೆ. ಬಲಿ ಚಕ್ರವರ್ತಿಯ ರಾಜ್ಯವು ಐಶ್ವರ್ಯ, ಅಭಿವೃದ್ಧಿ ಹೊಂದಿತ್ತು. ಅಂತಯೇ ನಮ್ಮ ಬಾಳಲ್ಲೂ ಲಕ್ಷ್ಮೀ ಸ್ಥಿರವಾಗಿ ನೆಲಿಸಿ, ಅಭಿವೃದ್ಧಿ ಸಿಗಲಿ ಎಂದು ಪ್ರಾರ್ಥನೆ ಮಾಡುವ ಪದ್ಧತಿ.


ದೀಪಾವಳಿ ಹಬ್ಬದಲ್ಲಿ ನೇಮ, ಉಪವಾಸ, ವ್ರತ ಕಥೆ ಇವ್ಯಾವುದೂ ಇಲ್ಲ. ಹಾಗಾಗಿ ಇದು ಸಂತಸ, ಸಡಗರ, ಸಂಭ್ರಮದ ಹಬ್ಬ :) ಬೆಳಿಗ್ಗೆ ಎದ್ದು ಅಭ್ಯಂಜನ ಸ್ನಾನ ಮಾಡಿ, ದೇವರ ಪೂಜೆ ಮಾಡಿ,ಹೊಸ ಉಡುಗೆ ಹಾಕಿಕೊಂಡು, ರುಚಿಯಾದ ಹಬ್ಬದ ಅಡಿಗೆ ಊಟ ಮಾಡಿ, ವಿಧ ವಿಧವಾದ ಪಟಾಕಿ ಹೊಡೆದು ಆನಂದಿಸುವ ಹಬ್ಬ ಇದು.
ದೀಪಾವಳಿಯ ಬೆಳಕು ಎಲ್ಲರ ಬಾಳನ್ನೂ ಪ್ರಕಾಶಗೊಳಿಸಲಿ ಎಂದು ಆಶಿಸುತ್ತೇನೆ :)

October 13, 2009

Ashtalakshmi Stotra in Kannada / ಅಷ್ಟಲಕ್ಷ್ಮೀ ಸ್ತೋತ್ರ

ದೀಪಾವಳಿ ಹಬ್ಬ ಹತ್ತಿರ ಬರುತ್ತಾ ಇದೆ. ಅಮಾವಾಸ್ಯೆ ದಿನ ಲಕ್ಷ್ಮಿ ಪೂಜೆ ಮಾಡುವ ಪದ್ಧತಿ ಇದೆ. ಈ ಸಂಧರ್ಭಕ್ಕೆ ಸರಿಯಾಗಿ ಅಷ್ಟಲಕ್ಷ್ಮಿ ಸ್ತೋತ್ರವನ್ನು ಬರೆಯುತ್ತಿದ್ದೇನೆ. ಲಕ್ಷ್ಮಿ ಎಂದರೆ ಬರಿ ಹಣ ಕಾಸು ಮಾತ್ರವಲ್ಲ, ಧಾನ್ಯ, ಧೈರ್ಯ, ವಿದ್ಯಾ, ಸಂತಾನ, ಇವೆಲ್ಲವೂ ನಿಧಿಗೆ ಸಮಾನ. ಅಂತಯೇ ಇವೆಲ್ಲವನ್ನೂ ಕರುಣಿಸು ಎಂದು ಲಕ್ಷ್ಮಿಯ ಎಂಟು ರೂಪಗಳನ್ನು ಈ ಸ್ತೋತ್ರದಲ್ಲಿ ಪ್ರಾರ್ಥಿಸುತ್ತೇವೆ. ಈ ಸ್ತೋತ್ರ ಕನ್ನಡದಲ್ಲಿದೆ. ದೊಡ್ಡದಾಗಿ ಮಾಡಲು ಚಿತ್ರದ ಮೇಲೆ ಕ್ಲಿಕ ಮಾಡಿ.

1. Audio Link by Meera Krishna ,(Album Link)

2. Audio Link by Shweta Pandit

3. Audio Link by Sowmya (song 8)

July 27, 2009

Varamahalakshmi Vrata / ವರಮಹಾಲಕ್ಷ್ಮಿ ವ್ರತ


ವರಮಹಾಲಕ್ಷ್ಮಿ ವ್ರತ - ಹೆಸರೇ ಸೂಚಿಸುವಂತೆ ವರಗಳನ್ನು ಕೊಡುವ ಲಕ್ಷ್ಮಿ ದೇವಿಯ ವ್ರತ ಇದು.ಈ ವ್ರತವನ್ನು ಶ್ರಾವಣ ಮಾಸದ ಶುಕ್ಲ ಪಕ್ಷದ ಶುಕ್ರವಾರ ಮಾಡುತ್ತಾರೆ. ಪೂರ್ಣಿಮೆಯ ಹಿಂದಿನ ಶುಕ್ರವಾರ ಮಾಡಬೇಕು. ಕೆಲವರ ಮನೆಯಲ್ಲಿ ವ್ರತ ಮಾಡುವ ಪದ್ಧತಿಗೆ ಇರುತ್ತೆ, ವ್ರತ ಮಾಡುವ ಪದ್ಧತಿ ಇಲ್ಲದಿದ್ದರೆ ಲಕ್ಷ್ಮಿ ದೇವಿಗೆ ಪೂಜೆ ಮಾಡಿ.

ದಿನ ಬೆಳಿಗ್ಗೆ ಎದ್ದು ಮಂಗಳ ಸ್ನಾನ ಮಾಡಬೇಕು. ವ್ರತ ಮಾಡುವವರು ಕಲಶ ಸ್ಥಾಪನೆ ಮಾಡಬೇಕು. ಪೂಜೆ ಮಾಡುವ ಸ್ಥಳವನ್ನು ಸ್ವಚ್ಚಗೊಳಿಸಿ, ಬಾಳೆ ಕಂದು, ಮಾವಿನ ಎಲೆಗಳಿಂದ ಸಿಂಗರಿಸಿ. ಅಷ್ಟದಳ ಪದ್ಮದ ರಂಗವಲ್ಲಿ ಹಾಕಬೇಕು. ಇದರ ಮೇಲೆ ಕಲಶ ಸ್ಥಾಪಿಸಬೇಕು. ಒಂದು ಚೊಂಬಿನಲ್ಲಿ ಸ್ವಲ್ಪ ನೀರು/ಅಕ್ಕಿ ಹಾಕಿ, ಜೊತೆಗೆ ಅರಿಶಿನದ ಗೊನೆ, ಅಡಿಕೆ, ಬೆಳ್ಳಿ ನಾಣ್ಯ / ಯಾವುದೇ ನಾಣ್ಯ(coin) ಹಾಕಿ.ಅದರ ಮೇಲೆ ಅರಿಶಿನ ಕುಂಕುಮ ಸವರಿದ ತೆಂಗಿನಕಾಯಿ ಇಟ್ಟು, ಇದರ ಮೇಲೆ ಮುಖದ ಆಕಾರದ ಚಿತ್ರ ಬರೆಯಬಹುದು ಅಥವಾ ಲಕ್ಷ್ಮಿ ದೇವಿಯ ಬೆಳ್ಳಿಯ ಮುಖವಾಡ ಇದ್ದರೆ ಅದನ್ನು ಈ ತೆಂಗಿನಕಾಯಿಗೆ ಜೋಡಿಸಿ. ಕಳಶದ ಬಾಯಿಗೆ ವೀಳ್ಯದ ಎಲೆ , ಮಾವಿನ ಎಲೆಗಳನ್ನು ಇಡಬೇಕು. ಕಳಶವನ್ನು ಅಕ್ಕಿ ಹರಡಿರುವ ತಟ್ಟೆಯ ಮೇಲೆ ಇಡಬೇಕು. ತಟ್ಟೆಯನ್ನು ಅಷ್ಟದಳ ರಂಗೋಲಿಯ ಮೇಲೆ ಇಡಬೇಕು. ಈ ಕಲಶಕ್ಕೆ ಹೊಸ ರವಿಕೆ ಬಟ್ಟೆ ಅಥವಾ ಸೀರೆ ಉಡಿಸಿ , ವಡವೆ ಹಾಕಿ ಅಲಂಕಾರ ಮಾಡಬಹುದು. ಈ ಕಲಶಕ್ಕೆ ಶ್ರೀ ಲಕ್ಷ್ಮಿಯನ್ನು ಆವಾಹನೆ ಮಾಡಿ, ಕಲಶವನ್ನು ಪೂಜೆ ಮಾಡಬೇಕು. ವರಮಹಾಲಕ್ಷ್ಮಿ ಪೂಜೆಯ ಚಿತ್ರ ಕೆಳಗಿದೆ.

ವರಮಹಾಲಕ್ಷ್ಮಿ ಕಲಶ ಸ್ಥಾಪನೆ , ಪೂಜೆ (karnataka.com)
ಷೋಡಶೋಪಚಾರದಿಂದ ಮಾಡುವ ಪೂಜಾ ವಿಧಿ ಇಲ್ಲಿದೆ. ಪೂಜಾ ಸಾಮಗ್ರಿಗಳ ಪಟ್ಟಿ ಇಲ್ಲಿದೆ. ಸಾಮನ್ಯವಾಗಿ ಉಪಯೋಗಿಸುವ ಪೂಜಾ ಸಾಮಗ್ರಿಗಳ ಜೊತೆಗೆ, 9 ಗಂಟಿನ ದಾರ ಇಟ್ಟು ಪೂಜೆ ಮಾಡಬೇಕು, ಪೂಜೆ ನಂತರ ಈ ದಾರವನ್ನು ಕೈಗೆ ಕಟ್ಟಿಕೊಳ್ಳಬೇಕು. ಪೂಜಾ ವಿಧಾನ ಇಲ್ಲಿದೆ. ಗಣಪತಿ ಅಷ್ಟೋತ್ತರ ಇಲ್ಲಿದೆ. ವಿನಾಯಕನಿಗೆ ಪೂಜೆ ಮಾಡಿ ನಂತರ ವರಮಹಾಲಕ್ಷ್ಮಿ ದೇವಿಗೆ ಪೂಜೆ ಮಾಡಿ.ಪೂಜೆಯ ನಂತರ ಕಥಾ ಶ್ರವಣ ಮಾಡಬೇಕು. ಸುಮಂಗಲಿಯರಿಗೆ ಅರಿಶಿನ ಕುಂಕುಮ ಕೊಡಬೇಕು.
ವರಮಹಾಲಕ್ಷ್ಮಿ ವ್ರತ ಪೂಜಾ ವಿಧಾನದ ಧ್ವನಿ ಮುದ್ರಣ ಇಲ್ಲಿ ಕೇಳಬಹುದು:
ವರಮಹಾಲಕ್ಷ್ಮಿ ವ್ರತ ಕಥೆ ಇಲ್ಲಿ ಓದಬಹುದು (thatskannada)

ಪೂಜೆಯ ಮಾರನೆಯ ದಿನ ಶನಿವಾರ, ದೇವರ ವಿಸರ್ಜನೆ ಮಾಡಿ, ನಂತರ ಕಲಶ ಪಾತ್ರೆಯ ಅಕ್ಕಿಯನ್ನು ಅಡಿಗೆಯಲ್ಲಿ ಉಪಯೋಗಿಸಿ, ಕಲಶಕ್ಕೆ ಇಟ್ಟ ತೆಂಗಿನಕಾಯಿಯಿಂದ ಸಿಹಿ ತಿಂಡಿಯನ್ನು ಮಾಡಿ. ವ್ರತದ ದಿನ ಪೂಜೆ ಮಾಡಲು ಆಗದಿದ್ದರೆ, ಶ್ರಾವಣದಲ್ಲಿ ಇನ್ನೊಂದು ಶುಕ್ರವಾರ ಈ ವ್ರತ ಮಾಡಬಹುದು.
ವರಮಹಾಲಕ್ಷ್ಮಿಯು ನಮ್ಮೆಲ್ಲರನ್ನು ಅನುಗ್ರಹಿಸಿ ಕಾಪಾಡಲಿ :)
Useful Links:

Lakshmi Ashottara
Lakshmi Ashtakam

All Devi Stotras

Lakshmi Sahasranama

Get this widget | Track details |


Songs on Lakshmi Devi

August 9, 2008

Maha Lakshmi Ashtakam in Kannada / ಶ್ರೀ ಮಹಾಲಕ್ಷ್ಮಿ ಅಷ್ಟಕ

ಲಕ್ಷ್ಮೀ ದೇವಿಗೆ ಹೇಳುವ ಸ್ತೋತ್ರಗಳಲ್ಲಿ ಲಕ್ಷ್ಮೀ ಅಷ್ಟಕವು ಒಂದು. ಇದು ಚಿಕ್ಕದಾಗಿದ್ದು , ಕಲಿಯಲು ಸುಲಭವಾಗಿದೆ. ಪ್ರತಿ ನಿತ್ಯ ಹೇಳಲು ಸೂಕ್ತವಾಗಿದೆ.
ದೊಡ್ಡದಾಗಿ ಮಾಡಲು ಚಿತ್ರದ ಮೇಲೆ ಕ್ಲಿಕ್ ಮಾಡಿ.
ಅಷ್ಟಕವನ್ನು ಸುಧಾ ರಘುನಾಥ ಅವರ ಸುಮಧುರ ಧ್ವನಿಯಲ್ಲಿ ಕೇಳಿ ಆನಂದಿಸಿ -
1.Audio Link by Sudha Raghunathan ,  (Album Link)
2.Audio Link by Meera Krishna


August 8, 2008

Lakshmi Ashtottara in Kannada / ಶ್ರೀ ಲಕ್ಷ್ಮೀ ಅಷ್ಟೋತ್ತರ

ಮುಂದಿನ ವಾರ ವರಮಹಾಲಕ್ಷ್ಮಿ ವ್ರತ ಬರುತ್ತಾ ಇದೆ. ಅದಕ್ಕಾಗಿ ಶ್ರೀ ಲಕ್ಷ್ಮೀ ಅಷ್ಟೋತ್ತರ ಇಲ್ಲಿದೆ.
ದೊಡ್ಡದಾಗಿ ಮಾಡಲು ಚಿತ್ರದ ಮೇಲೆ ಕ್ಲಿಕ್ ಮಾಡಿ.

ಅಷ್ಟೋತ್ತರದ ಧ್ವನಿ ಮುದ್ರಣ (audio) ಇಲ್ಲಿ ಕೇಳಬಹುದು - 1.Audio Link
2.Lakshmi Ashtottara by M.S.Subbalakshmi -song15

3.Audio link -song 3


Link to Lakshmi Ashtottara in Hindi and English
Blog Widget by LinkWithin