ಪೂಜೆ ಶುರು ಮಾಡುವ ಮುನ್ನ , ಅಲಂಕಾರ, ಅಣಿ ಮಾಡಿಕೊಳ್ಳಕ್ಕೆ ಸುಮಾರು ಹೊತ್ತು ಆಗುತ್ತೆ. ಪೂಜೆ ಅಂದರೆ ಎಷ್ಟೊಂದು ಸಾಮಗ್ರಿ ಉಪಯೋಗಿಸುತ್ತೀವಿ , ಪೂಜೆ ಮಾಡೋ ಸಡಗರದಲ್ಲಿ ಕೆಲವೊಮ್ಮೆ ಒಂದೆರಡು ಸಾಮಾನು ಮರೆಯುವ ಸಾಧ್ಯತೆಗಳು ಇದೆ :) ಹೀಗೆ ಆಗದೆ ಇರಲಿ ಅಂತ ಪೂಜಾ ಸಾಮಾನುಗಳ ಒಂದು ಪಟ್ಟಿಯನ್ನು ಮಾಡಿದ್ದೀನಿ.
ಸಾಮನ್ಯವಾಗಿ ಎಲ್ಲ ಪೂಜೆಗಳಿಗೂ ಉಪಯೋಗಿಸುವ ಸಾಮಗ್ರಿಗಳು:
- ರಂಗೋಲಿ, ಮಣೆ / ಮಂಟಪ
- ದೇವರ ವಿಗ್ರಹ, ದೇವರ ಪಟ
- ನಂದಾ ದೀಪ, ದೀಪದ ಕಂಭ, ತುಪ್ಪ, ಎಣ್ಣೆ, ದೀಪಕ್ಕೆ ಹಾಕುವ ಹತ್ತಿ ಬತ್ತಿ
- ಘಂಟೆ, ಪಂಚಪಾತ್ರೆ, ಉದ್ದರಣೆ, ಅರ್ಘ್ಯ ಪಾತ್ರೆ, ನೀರು
- ಪೂಜಾ ವಿಧಾನ ಇರುವ ಪುಸ್ತಕ /ಕ್ಯಾಸೆಟ್ / ಸಿ.ಡಿ.
- ಅರಿಶಿನ, ಕುಂಕುಮ, ಮಂತ್ರಾಕ್ಷತೆ
- ಶ್ರೀಗಂಧ, ಊದಿನ ಕಡ್ಡಿ
- ಹೂವು, ಪತ್ರೆ, ಗೆಜ್ಜೆ ವಸ್ತ್ರ
- ಪಂಚಾಮೃತ - ಹಾಲು, ಮೊಸರು, ಸಕ್ಕರೆ, ತುಪ್ಪ, ಜೇನುತುಪ್ಪ
- ವೀಳ್ಯದ ಎಲೆ, ಅಡಿಕೆ, ಹಣ್ಣು , ತೆಂಗಿನಕಾಯಿ
- ನೈವೇದ್ಯ - ಪಾಯಸ, ಹುಗ್ಗಿ, ಅನ್ನ, ಕೋಸಂಬರಿ , ಇತ್ಯಾದಿ
- ಹಲಗಾರತಿ, ಕರ್ಪೂರ, ಮಂಗಳಾರತಿ ಬತ್ತಿ
- ಆರತಿ ತಟ್ಟೆ, ಸೊಡಲು, ಹೂಬತ್ತಿ,
ಕೆಲವು ಪೂಜೆಗಳಲ್ಲಿ ಅಧಿಕವಾಗಿ ಇನ್ನಷ್ಟು ಸಾಮಗ್ರಿಗಳನ್ನು ಉಪಯೋಗಿಸುತ್ತೀವಿ :
- ಕಳಶ, ಅರಿಶಿನದ ಕೊನೆ, ಜನಿವಾರ, ಅರಿಶಿನ ದಾರ
- ಮರದ ಜೊತೆ / ಬಾಗಿನ
- ಬಳೆ, ಬಿಚ್ಚೋಲೆ, ಕನ್ನಡಿ, ಕಪ್ಪು, ರವಿಕೆ ಬಟ್ಟೆ
- ಸೋಬಲಕ್ಕಿ, ಉಪಾಯನ ದಾನ
- ನವಗ್ರಹ ಮಂಡಲ ......ಇತ್ಯಾದಿ
ಇವುಗಳೊಂದಿಗೆ ಇನ್ನು ಹಲವಾರು ವಸ್ತುಗಳ ಬಳಕೆ ಮಾಡಬಹುದು ಮುಖ್ಯವಾಗಿ ಅಲಂಕಾರ ಮಾಡುವುದಕ್ಕೆ. ಮಾರುಕಟ್ಟೆಯಲ್ಲಿ ಅನೇಕ ವಿಧವಾದ ಅಲಂಕಾರಿಕ ಸಾಮಾನು ದೊರೆಯುತ್ತದೆ . ಇದು ಪ್ರತಿಯೊಬ್ಬರ ಆಸಕ್ತಿ ಮತ್ತು ಅಭಿರುಚಿ ಮೇಲೆ ಅವಲಂಭಿಸಿದೆ.
Related Links:
Navagraha Dhanya
Marada jothe Baagina